ರಾಮನಗರ: ಕೋವಿಡ್ ಆಸ್ಪತ್ರೆಗೆ ತೆರಳಿ ಸೊಂಕಿತರಿಗೆ ಆತ್ಮಸ್ಥೈರ್ಯ ತುಂಬಿದ್ದ ಸಂಸದ ಡಿ.ಕೆ.ಸುರೇಶ್ ಇದೀಗ ಮೃತ ಸೋಂಕಿತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಮೃತರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಕನಕಪುರದ ಸಪ್ತಗಿರಿ ಜ್ಯುವೆಲರ್ಸ್ ಮಾಲೀಕರಾದ ನರಸಿಂಹ ಶೆಟ್ಟಿ ಅವರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಂಕಿತರು ಸಾವನ್ನಪ್ಪಿದ್ದರು.
ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆ ಕನಕಪುರದ ದೇಗುಲ ಮಠದ ಸಮೀಪದ ಸ್ಮಶಾನದಲ್ಲಿ ಮಾಡಲಾಯಿತು.ಈ ವೇಳೆ ಅಂತ್ಯಕ್ರಿಯೆಯಲ್ಲಿ ಪಿಪಿಇ ಕಿಟ್ ಧರಿಸಿ ಸಂಸದ ಡಿ.ಕೆ ಸುರೇಶ್, ಎಂಎಲ್ಸಿ ರವಿ ಪಾಲ್ಗೊಂಡಿದ್ದು, ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ್ದಾರೆ.
