Site icon PowerTV

ವಿವಿಧ ಬೇಡಿಕೆ ಈಡೇರಿಕೆಗೆ ಹಾಗೂ ಆಡಳಿತಾಧಿಕಾರಿ ನಡೆ ಖಂಡಿಸಿ ಶುಶ್ರೂಷಾ ಸಿಬ್ಬಂದಿಗಳ ಪ್ರತಿಭಟನೆ

ಹುಬ್ಬಳ್ಳಿ : ಕೊರೋನಾ ವೈರಸ್ ವಿರುದ್ಧ ಹೋರಾಟದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಶುಶ್ರೂಷಾ ಸಿಬ್ಬಂದಿಗಳು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆಯಲ್ಲಿ ಪಿಪಿಇ ಕಿಟ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್ ಗಳನ್ನ ಸರಿಯಾಗಿ ನೀಡುತ್ತಿಲ್ಲ ಎಂದು ಶುಶ್ರೂಷಾ ಸಿಬ್ಬಂದಿಗಳು ಆಕ್ರೋಶ ವ್ಯಕ್ತಪಡಿಸಿದರು.

ಬೇಡಿಕೆ ಈಡೇರಿಸಲು ಮನವಿಯನ್ನ ಸಿಇಓ ಗೆ ಸಲ್ಲಿಸಲು ಹೋದರೆ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆಂದು ಆರೋಪಿಸಿದರು. ಅಲ್ಲದೇ ಎಲ್ಲರೂ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಅಂತಾ ಶುಶ್ರೂಷಾ ಸಿಬ್ಬಂದಿಗಳು ಕಿಮ್ಸ್ ಸಿಇಒ ರಾಜಶ್ರಿ ಜೈನಾಪುರ ವಿರುದ್ಧ ಪ್ರತಿಭಟನೆ ನಡೆಸಿದರು.

ಇನ್ನೂ ಸ್ಥಳಕ್ಕೆ ಭೇಟಿ ನೀಡಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿಯವರು ನರ್ಸ್ ಗಳ ಬೇಡಿಕೆ ಈಡೇರಿಸುವುದಾಗಿ ಆಶ್ವಾಸನೆ ನೀಡಿದರು.

Exit mobile version