Site icon PowerTV

ಕಿಮ್ಸ್​​ನಲ್ಲಿ 13 ಕೊರೋನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಯಶಸ್ವಿ

ಹುಬ್ಬಳ್ಳಿ : ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಶತಾಯಗತಾಯ ಹೋರಾಟ ನಡೆಸುತ್ತಿದ್ದು , ಹೆಚ್ಚುತ್ತಿರುವ ಸೋಂಕಿನ ಮಧ್ಯದಲ್ಲಿಯೇ ಕಿಮ್ಸ್ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮೂಲಕ ಮತ್ತೊಂದು ಮೈಲಿಗಲ್ಲನ್ನು ಸೃಷ್ಟಿಸಿದೆ.  ಕೀಮ್ಸ್ ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯಿಂದ ಇದುವರೆಗೆ 13 ಜನರು ಗುಣಮುಖರಾಗಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ರಾಜ್ಯದ ಮೊದಲ ಯಶಸ್ವಿ ಪ್ಲಾಸ್ಮಾ ಥೆರಪಿ ಮಾಡಿದ ಕೀರ್ತಿಗೆ ಪಾತ್ರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಪಡೆದ ಎಲ್ಲಾ 13 ಮಂದಿ ಕೂಡ ಗುಣಮುಖರಾಗಿರುವುದು ವಿಶೇಷವಾಗಿದೆ.

Exit mobile version