Site icon PowerTV

ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ರಾಜಸ್ಥಾನ ಸ್ಪೀಕರ್

ಜೈಪುರ :  ರಾಜಸ್ಥಾನ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಇಂದು ಸ್ಪೀಕರ್ ಸಿ.ಪಿ ಜೋಶಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.

ಸಚಿನ್ ಪೈಲಟ್ ಸೇರಿದಂತೆ 19 ಮಂದಿ ಶಾಸಕರು ಸ್ಪೀಕರ್ ನೀಡಿದ್ದ ಅನರ್ಹತೆ ನೋಟಿಸ್ ಪ್ರಶ್ನಿಸಿ ಹೈಕೋರ್ಟ್​ಗೆ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕು. ಸದ್ಯ ಸ್ಪೀಕರ್​ ಯಾವ್ದೇ ತೀರ್ಮಾನ ಕೈಗೊಳ್ಳುವಂತಿಲ್ಲ ಅಂತ ಹೇಳಿತ್ತು.

ಇಂದು ಸ್ಪೀಕರ್ ಪರ ವಿಚಾರಣೆಗೆ ಹಾಜರಾದ ವಕೀಲ ಕಪಿಲ್ ಸಿಬಲ್ ಪ್ರಕರಣದ ಹೆಚ್ಚಿನ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಬೇಕಿದೆ. ಸಂವಿಧಾನದ ಶೆಡ್ಯೂಲ್‌ 10 ಸ್ಪೀಕರ್‌ಗೆ ಹಲವು ಅಧಿಕಾರಗಳನ್ನ ನೀಡಿದೆ. ಆದ್ರೆ, ಹೈಕೋರ್ಟ್‌ ಸ್ಪೀಕರ್ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಅಂತಾ ಹೇಳಿದೆ. ಹೀಗಾಗಿ ಹೈಕೋರ್ಟ್‌ನಲ್ಲಿ ಪ್ರಕರಣದ ಹೆಚ್ಚಿನ ವಿಚಾರಣೆ ನಡೆಯೋದು ಮತ್ತು ಹೈಕೋರ್ಟ್‌ ಎತ್ತಿರೋ ಪ್ರಶ್ನೆಗಳಿಗೆ ಉತ್ತರಿಸಲು ಹೆಚ್ಚಿನ ಕಾಲಾವಕಾಶ ಬೇಕಿದೆ ಅಂತ ವಿವರಣೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ.

Exit mobile version