Site icon PowerTV

ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ ಐ ಆತ್ಮಹತ್ಯೆ

ಹಾಸನ – ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ನಗರ ಠಾಣೆ ಪಿ. ಎಸ್.ಐ.ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ 9 ಗಂಟೆಗೆ ತಮ್ಮ ಮನೆಯಲ್ಲಿಯೇ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೆ ಯತ್ನಿಸಿದ್ದ ಕಿರಣ್ ಕುಮಾರ್, ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಆಸ್ಪತ್ರೆಗೆ ರವಾನೆ ಮಾಡಿದರೂ, ಚಿಕಿತ್ಸೆ ಫಲಕಾರಿಯಾಗದೇ ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ನೆನ್ನೆ ಒಂದು ಕೊಲೆ ಪ್ರಕರಣ ಭೆದಿಸಿದ್ದ ಪಿಎಸ್ ಐ, ಇಂದು ಮಧ್ಯರಾತ್ರಿ ನಡೆದಿದ್ದ ಕೊಲೆ ಆರೋಪಿ‌ ಬಂಧನಕ್ಕೆ ಕಾರ್ಯಕ್ರವೃತ್ತವಾಗಿದ್ದರು. ಕೊಲೆ‌ ಸಂಬಂಧ ಕಾನೂನು ಪ್ರಕ್ರಿಯೆ ಮುಗಿಸಿ ಬೆಳಿಗ್ಗೆ 9 ಗಂಟೆಗೆ ಮನೆಗೆ ಹೋಗಿದ್ದ ಎಸ್.ಐ ಕಿರಣ್, ಮನೆಗೆ ಹೋದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ, ಎಎಸ್ಪಿ ನಂದಿನಿ ಭೇಟಿ ನೀಡಿದ್ದಾರೆ. ತನಿಖೆಯ ಬಳಿಕ ಪಿಎಸ್ ಐ ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಿದೆ.

Exit mobile version