Site icon PowerTV

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಚೇತರಿಕೆಗೆ ವಿಶೇಷ ಪೂಜೆ – ಪ್ರಾರ್ಥನೆ

ಶಿವಮೊಗ್ಗ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಬೇಗ ಗುಣಮುಖರಾಗಲೆಂದು ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು, ವಿಶೇಷ ಪೂಜೆ ನೆರವೇರಿಸಿ‌ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಂದು ರವೀಂದ್ರನಗರದ ಬಲಮುರಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕಾರ್ಯಕರ್ತರು, ದೆಹಲಿಯ ಗಂಗಾರಾಂ ಆಸ್ಪತ್ರೆಗೆ ಅನಾರೋಗ್ಯದ ಹಿನ್ನಲೆಯಲ್ಲಿ ಸೋನಿಯಾ ಗಾಂಧಿಯವರು ನಿನ್ನೆ ದಾಖಲಾಗಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ದೇವರಿಗೆ ಸೋನಿಯಾ ಗಾಂಧಿರವರ ಹೆಸರಲ್ಲಿ ಅರ್ಚನೆ, ರುದ್ರಾಭಿಷೇಕ ಹಾಗೂ ಸಾವಿರ ಗರಿಕೆ ಅರ್ಪಿಸಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಅ.ಪ. ರಾಮ್ ಭಟ್ಟ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಪ್ರವೀಣ್ ಕುಮಾರ್, ಎಚ್ ಪಿ ಗಿರೀಶ್, ಮಹಾನಗರ ಪಾಲಿಕೆ ಸದಸ್ಯರಾದ ಎಚ್.ಸಿ ಯೋಗೀಶ್, ರೇಖಾ ರಂಗನಾಥ್, ಇತರೆ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version