Site icon PowerTV

ಹರಿದ ಪಿಪಿಇ ಕಿಟ್ ಧರಿಸಿ ಕರ್ತವ್ಯ ನಿರ್ವಹಿಸುತ್ತಿರುವ ಕಿಮ್ಸ್ ಸಿಬ್ಬಂದಿ

ಹುಬ್ಬಳ್ಳಿ :  ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ನೀಡಲಾದ ಪಿಪಿಇ ಕಿಟ್‌ಗಳು ಹರಿದು ಹೋಗಿದ್ದು, ಉತ್ತಮ ಗುಣಮಟ್ಟದ ಕಿಟ್ ನೀಡಿಲ್ಲವೆಂಬ ಆರೋಪ ಕೇಳಿಬಂದಿದೆ. ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಜೀವದ ಹಂಗು ತೊರೆದು ಕಿಮ್ಸ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ದೋಷಪೂರಿತ ಸುರಕ್ಷತಾ ಕಿಟ್‌ ನೀಡಲಾಗಿದೆ ಎನ್ನಲಾಗಿದೆ. 

 ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ಗುಣಮಟ್ಟದ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ ಕಿಟ್‌), ಎನ್‌ 95 ಮಾಸ್ಕ್‌ ಧರಿಸಬೇಕು. ಆದರೆ ಕಿಮ್ಸ್‌ನ ಕೆಲ ಸಿಬ್ಬಂದಿಗೆ ನೀಡಲಾದ ಪಿಪಿಇ ಕಿಟ್‌ಗಳು ಹರಿದು ಹೋಗಿವೆ. ಕೊವಿಡ್‌ ವಾರ್ಡ್‌ನ ಐಸಿಯು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮಾತ್ರ ಗುಣಮಟ್ಟದ ಕಿಟ್‌ಗಳನ್ನು ನೀಡಲಾಗಿದೆ. ಸಾಮಾನ್ಯ ವಾರ್ಡ್‌ಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮತ್ತು ಶುಶ್ರೂಷಕರಿಗೆ ಎರಡು, ಮೂರನೇ ದರ್ಜೆಯ ಸುರಕ್ಷತಾ ಕಿಟ್‌ಗಳನ್ನು ಕೊಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ .

 

Exit mobile version