Wednesday, September 10, 2025
HomeUncategorizedವಿವಿಧ ಬೇಡಿಕೆಗಳಿಗೆ ಆಗ್ರಹ - ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹ – ವಿವಿಧ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

ಶಿವಮೊಗ್ಗ:ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಜಿಲ್ಲಾ ಶಾಖೆ ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಗಳ ಕಾಯ್ದೆ, ಕೈಗಾರಿಕಾ ವಿವಾದ ಕಾಯ್ದೆ, ಗುತ್ತಿಗೆ ಕಾರ್ಮಿಕರ ಕಾಯ್ದೆಗಳಿಗೆ ಮಾದರಿ ಸ್ಥಾಯಿ ಆದೇಶಗಳಲ್ಲಿ ನಿಗದಿತ ಅವಧಿ ಕೆಲಸ ಅಳವಡಿಸಲು ತರಲಾಗಿರುವ ಪ್ರಗತಿ ವಿರೋಧಿ ತಿದ್ದುಪಡಿಗಳು ಹಾಗೂ ತುಟ್ಟಿಭತ್ಯೆ ಮುಂದೂಡುವಿಕೆಯ ಆದೇಶಗಳನ್ನು ಕೂಡಲೇ ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅಸಂಘಟಿತ ಕ್ಷೇತ್ರದ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ 2008ರ ಅಡಿಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯ ಅನುಷ್ಟಾನಕ್ಕೆ ಕೇಂದ್ರ ಸರ್ಕಾರವು, ಪ್ರತಿ ವರ್ಷ 10 ಸಾವಿರ ಕೋಟಿ ರೂ. ವರ್ತುಲ ನಿಧಿ ಸ್ಥಾಪಿಸಬೇಕು. ಕೇಂದ್ರ ಸರ್ಕಾರವು ರಕ್ಷಣಾ ವಲಯ ಹಾಗೂ ರಕ್ಷಣಾ ಉಪಕರಣ ಕಾರ್ಖಾನೆಗಳು, ಸಾರಿಗೆ, ರೈಲ್ವೆ, ಜೀವವಿಮಾ ನಿಗಮ, ಸಾಮಾನ್ಯ ವಿಮಾ ನಿಗಮ, ಬ್ಯಾಂಕುಗಳು, ಬಂದರು, ವಿಮಾನ ನಿಲ್ದಾಣಗಳು ಮತ್ತಿತರ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣಗೊಳಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ, ಕಾರ್ಮಿಕ ವರ್ಗಕ್ಕೆ ಸಂಬಂಧಪಟ್ಟ ನೀತಿ ನಿರೂಪಣೆಯ ಎಲ್ಲ ಹಂತಗಳಲ್ಲಿ ಕಾರ್ಮಿಕ ವರ್ಗದ ಅಭಿಪ್ರಾಯ, ಅನಿಸಿಕೆಗಳನ್ನು ಪಡೆಯುವ ವಿಧಾನವನ್ನು ಖಾತರಿಪಡಿಸಬೇಕು. ಕಾರ್ಮಿಕರು ಗಳಿಸಿಟ್ಟಿರುವ ರಜೆಯನ್ನು ಕಡಿತಗೊಳಿಸದೇ ಪ್ರತಿ ತಿಂಗಳ 7 ನೇ ದಿನಾಂಕದಂದು ವೇತನ, ತುಟ್ಟಿ ಭತ್ಯೆ ಹಾಗೂ ಇ-ಎಲ್ ನಗಧೀಕರಣ ನೀಡಬೇಕು. ಸಾರಿಗೆ ನಿಗಮಗಳಿಗೆ ವಿದ್ಯಾರ್ಥಿ ಹಾಗೂ ಮತ್ತಿತರೆ ಪಾಸುಗಳ ಬಾಬ್ತು ನೀಡಬೇಕಾಗಿರುವ 3 ಸಾವಿರ ಕೊಟಿ ರೂ. ನೀಡಬೇಕು. ಪ್ರತಿ ಸಾರಿಗೆ ನಿಗಮಗಳಿಗೆ ಕನಿಷ್ಟ 500 ಕೋಟಿ ರೂ. ಸಂಕಷ್ಟ ಧನಸಹಾಯ ನೀಡಬೇಕು. ಬಜೆಟ್ ಬೆಂಬಲ ನೀಡುವ ಮೂಲಕ ಸಾರಿಗೆ ನಿಗಮಗಳನ್ನು ಸಂರಕ್ಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments