Site icon PowerTV

ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ತುಮಕೂರು : ಆಹಾರ ಹುಡುಕಿಕೊಂಡು ನಗರಕ್ಕೆ ಬಂದಿದ್ದ ಚಿರತೆಯೊಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಮೃತಪಟ್ಟಿದೆ. 

ಸೋಮವಾರ ರಾತ್ರಿ 11.50ರ‌ ಸಮಯದಲ್ಲಿ ತುಮಕೂರು ನಗರದ ಕ್ಯಾತ್ಸಂದ್ರ ಬಳಿ ಘಟನೆ ಸಂಭವಿಸಿದೆ. ಕ್ಯಾತಸಂದ್ರ ಬಳಿ ಹಾದುಹೋಗುವ ಬೆಂಗಳೂರು- ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಜಾಸ್ ಟೋಲ್ ಗೇಟ್ ಬಳಿ ಘಟನೆ ಸಂಭವಿಸಿದೆ.

ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದ್ದು ವಾಹನ ಸವಾರರು ಗಮನಿಸಿ ಅರಣ್ಯ ಹಾಗೂ ಪೊಲೀಸರ ಗಮನಕ್ಕೆ ತಂದಿದ್ದಾರೆ. ಸದ್ಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

 

Exit mobile version