Site icon PowerTV

ಡಿಜಿ ಹಳ್ಳಿಯಲ್ಲಿ ಗಲಭೆ ನಡೆದಿರುವ ಹಿನ್ನಲೆ : ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್

ಕೋಲಾರ: ಬೆಂಗಳೂರಿನ ಡಿಜಿ ಹಳ್ಳಿಯಲ್ಲಿ ಗಲಭೆ ನಡೆದಿರುವ ಹಿನ್ನಲೆಯಲ್ಲಿ ಕೋಲಾರ ಜಿಲ್ಲೆಯಾದ್ಯಂತ ಹೈ ಆಲರ್ಟ್ ಘೋಷಣೆ ಮಾಡಲಾಗಿದೆ. ಕೋಲಾರ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಅಂತಾ ಕೋಲಾರ ಜಿಲ್ಲಾ ರಕ್ಷಣಾಧಿಕಾರಿ ಕಾರ್ತೀಕ್ ರೆಡ್ಡಿ ಹೇಳಿದ್ರು.

ಗಲಭೆಯ ಕಿಡಿಗೇಡಿಗಳು ಜಿಲ್ಲೆಗೆ ಬಂದಿರುವ ವದಂತಿಯ ಹಿನ್ನಲೆಯಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳ ಓಡಾಟದ ಮೇಲೆ ನಿಗಾವಹಿಸಲಾಗಿದೆ ಅಂತ ಹೇಳಿದ್ರು. ಪ್ರಕರಣ ಸಂಬಂಧ ಧರಣಿ, ಪ್ರತಿಭಟನೆಗಳನ್ನ ನಡೆಸಿದರೆ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದರು.

-ಆರ್.ಶ್ರೀನಿವಾಸಮೂರ್ತಿ

Exit mobile version