Site icon PowerTV

ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಹೆಚ್​.ಡಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ

ಹಾಸನ : ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕಾ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನೇತೃತ್ವದಲ್ಲಿ ಹಾಸನದಲ್ಲಿ ಜೆಡಿಎಸ್ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಶಾಸಕರಾದ ಎ.ಟಿ. ರಾಮಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಕೆ.ಎಸ್. ಲಿಂಗೇಶ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. 

ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ‌ ತಂದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್, ರೈತ ಹಾಗೂ ಕಾರ್ಮಿಕ ‌ಕಾಯ್ದೆ ಹಿಂಪಡೆಯಲು ಆಗ್ರಹ ಪಡಿಸಿದರು. ಸರ್ಕಾರದ ಏಕ ಪಕ್ಷೀಯ ನಡೆಯ ವಿರುದ್ಧ ಜೆಡಿಎಸ್ ಶಾಸಕರ ವಾಗ್ದಾಳಿ ನಡೆಸಿದ್ದು, ತಿದ್ದುಪಡಿ ಕುರಿತು ಚರ್ಚಿಸಲು ವಿಧಾನ ಮಂಡಲದ ಉಭಯ ಸದನ ಕರೆಯಬೇಕು, ಜನವಿರೋಧಿ ಕಾಯ್ದೆ ವಾಪಸ್ ಪಡೆಯದೇ ಇದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದರು.

Exit mobile version