Tuesday, September 9, 2025
HomeUncategorizedಶಾಲಾ ಮಕ್ಕಳಿಲ್ಲದೆ 74ನೇ ಸ್ವಾತಂತ್ರ್ಯ ದಿನಾಚರಣೆ | ಸಾಧಕರಿಗೆ ಸನ್ಮಾನ

ಶಾಲಾ ಮಕ್ಕಳಿಲ್ಲದೆ 74ನೇ ಸ್ವಾತಂತ್ರ್ಯ ದಿನಾಚರಣೆ | ಸಾಧಕರಿಗೆ ಸನ್ಮಾನ

ಕೋಲಾರ : ಕೊರೋನಾ ಕಾರಣದಿಂದ ಜಿಲ್ಲೆಯಲ್ಲಿ  74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯ್ತು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಅವ್ರು ಧ್ವಜಾರೋಹಣ ನೆರವೇರಿಸಿದ್ರು. ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮವನ್ನ ಆಯೋಜಿಸಿತ್ತು.

ಧ್ವಜಾರೋಹಣ ನೆರವೇರಿಸಿದ ಸಚಿವರು, ಆಕರ್ಷಕ ಪೆರೇಡ್ ಪಡೆಗಳನ್ನ ವೀಕ್ಷಿಸಿದ್ರು. ಪೊಲೀಸ್ ಇಲಾಖೆ ಹಾಗೂ ಗೃಹ ರಕ್ಷಕ ದಳದವ್ರು ನಡೆಸಿದ ಪೇರೆಡ್ ಪಥ ಸಂಚಲನ ಆಕರ್ಷಕವಾಗಿತ್ತು. ಮಾಜಿ ಯೋಧರ ಟ್ರಸ್ಟ್​ನಿಂದ 74 ಮೀಟರ್ ಉದ್ದದ ರಾಷ್ಟ್ರಧ್ವಜವನ್ನ ಪ್ರದರ್ಶಿಸಿದ್ದು ನೋಡುಗರ ಕಣ್ಮನ ಸೆಳೆಯಿತು.

ಇನ್ನು ಯುಪಿಎಸ್ಸಿ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ ಸಾಧಕರನ್ನ, ಎಸ್ಸೆಸ್ಸೆಲ್ಸಿ, ಪಿಯುಸಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನ ಸನ್ಮಾನಿಸಲಾಯಿತು. ಕೊರೋನಾ ವಾರಿಯರ್ಸ್​ಗಳಿಗೆ ಗೌರವಿಸಿ ಅಭಿನಂದಿಸಲಾಯಿತು.

ಶಾಲಾ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವ ಅವಕಾಶ ಇಲ್ಲದಿದ್ದರಿಂದ ಇಡೀ ಕ್ರೀಡಾಂಗಣ ಬಿಕೋ ಎನ್ನುತ್ತಿತ್ತು. ಸ್ವಾತಂತ್ರ್ಯೋತ್ಸವದಲ್ಲಿ ಸಂಸದ ಎಸ್.ಮುನಿಸ್ವಾಮಿ, ಶಾಸಕ ಕೆ.ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿದಂತೆ ಹಲವರು ಹಾಜರಿದ್ದರು. ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್ ಅವ್ರು, ಜಿಲ್ಲೆಯಲ್ಲಿ ಕೊರೋನಾ ವಿರುದ್ದ ಹೋರಾಡಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಂಡಿದೆ.  ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪಣ ತೊಟ್ಟಿದ್ದೇವೆ ಎಂದು ಹೇಳಿದರು.

– ಆರ್.ಶ್ರೀನಿವಾಸಮೂರ್ತಿ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments