Site icon PowerTV

ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹಿಸಿ ಚಿತ್ರಮಂದಿರ ಕಾರ್ಮಿಕರ ಪ್ರತಿಭಟನೆ

ಹುಬ್ಬಳ್ಳಿ : ರಾಜ್ಯದ ಸಮಗ್ರ ಸಿನಿಮಾರಂಗಕ್ಕೆ 14 ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಹಾಗೂ 20 ಕೋಟಿ ರೂಪಾಯಿ ಚಿತ್ರೋದ್ಯಮ ಪುನಶ್ಚೇತನಕ್ಕೆ‌ ನೆರವು ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿಯ ಚಿತ್ರಮಂದಿರ ಕಾರ್ಮಿಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ನಗರದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಅವರು, ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರೋದ್ಯಮದ 15 ಸಾವಿರಕ್ಕೂ ಅಧಿಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ರಾಜ್ಯ ಸರ್ಕಾರ ಚಿತ್ರೋದ್ಯಮವನ್ನು ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಅನುಕೂಲ ಮಾಡಬೇಕು ಎಂದು ಆಗ್ರಹಿಸಿದರು.

Exit mobile version