Site icon PowerTV

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆಯಿಂದ ಪ್ರತಿಭಟನೆ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನಂದಗಡ ಹೋಗುವ ರಸ್ತೆಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಟಾಪನೆ ಮಾಡುವ ಸಂದರ್ಭದಲ್ಲಿ ಲಾಠಿಚಾರ್ಜ್ ಮಾಡಿ ರಾಯಣ್ಣನ ಮೂರ್ತಿಯನ್ನು ಹಾಗೂ ರಾಷ್ಟ್ರೀಯ ಧ್ವಜವನ್ನು ವಶಕ್ಕೆ ಪಡೆದುಕೊಂಡಿರುವುದನ್ನು ವಿರೋಧಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನಿಗೆ ಹಾಗೂ ರಾಷ್ಟ್ರೀಯ ಧ್ವಜಕ್ಕೆ ಅವಮಾನ ಮಾಡಿದ ಕೋಮುವಾದಿ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅಹಿಂದ ವರ್ಗದ ಮೇಲೆ ಪದೇಪದೇ ಅನ್ಯಾಯ ಆಗುತ್ತಿದೆ. ಕಳೆದ ಬಾರಿ ಚಿಕ್ಕನಾಯಕನಹಳ್ಳಿಯಲ್ಲಿ ಕನಕದಾಸರ ವೃತ್ತವನ್ನು ತೆರವುಗೊಳಿಸಿದ್ದರು. ಏಕಾಏಕಿ ಲಾಠಿಚಾರ್ಜ್ ಮಾಡಿದ ಅಧಿಕಾರಿಗಳನ್ನು ಅಮಾನತ್ತು ಮಾಡುವ ಮೂಲಕ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಜರುಗಿಸಿ, ಮುಂಬರುವ ದಿನಗಳಲ್ಲಿ ಈ ರೀತಿ ನಡೆಯದಂತೆ ಮುನ್ನಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿದರು.

Exit mobile version