Site icon PowerTV

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಹಿನ್ನೆಲೆ ಶ್ರೀರಾಮಸೇನಾದಿಂದ ವಿಜಯೋತ್ಸವ ಆಚರಣೆ

ಹುಬ್ಬಳ್ಳಿ : ರಾಜ್ಯಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಶ್ರೀರಾಮಸೇನಾ ವತಿಯಿಂದ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿಂದು ಹುಬ್ಬಳ್ಳಿಯಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಬಳಿಕ ಮಾತನಾಡಿದ ಪ್ರಮೋದ್ ಮುತಾಲಿಕ್, ಶ್ರೀರಾಮಸೇನಾ ಹೋರಾಟದ ಪ್ರತಿಫಲವಾಗಿ ರಾಜ್ಯ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದೆ ಎಂದರು.

ಎಷ್ಟೋ ಜನ ಕಲಾವಿದರು ಆತ್ಮಹತ್ಯೆಗೆ ಮುಂದಾಗಿದ್ದರು. ಅಲ್ಲದೆ ಗಣೇಶೋತ್ಸವವನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಕುಟುಂಬಗಳು ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡಿದ್ದವು. ಈ ನಿಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ತೆಗೆದುಕೊಂಡ ತೀರ್ಮಾನ ಸ್ವಾಗತಾರ್ಹವಾಗಿದೆ ಎಂದು ಅಭಿನಂದನೆ ಸಲ್ಲಿಸಿದರು.

ರಾಜ್ಯ ಸರ್ಕಾರ ಇನ್ನೂ ಸ್ವಲ್ಪ ಅವಧಿಯ ಮುಂಚಿತವಾಗಿಯೇ ತೀರ್ಮಾನವನ್ನು ತೆಗೆದುಕೊಳ್ಳಬೇಕಿತ್ತು.ಅಂದಾಗ ಕಲಾವಿದರ ಆತ್ಮಸ್ಥೈರ್ಯ ಹೆಚ್ಚಿಸಲು ಸಾಧ್ಯವಾಗುತಿತ್ತು ಎಂದ ಅವರು, ಶ್ರೀರಾಮಸೇನಾ ಸಂಘಟನೆ ಏಕಾಂಗಿಯಾಗಿ ಹೋರಾಟ ನಡೆಸಿದ್ದು, ಹೋರಾಟಕ್ಕೆ ಜಯಸಿಕ್ಕಿದೆ ಎಂದು ಅವರು ಹೇಳಿದರು.

Exit mobile version