ವಿಜಯಪುರ : ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಂದು ಐದು ಸಾವಿರದ ಗಡಿ ದಾಟಿದೆ. ಇಂದು ಹೊಸದಾಗಿ 64 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5040ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು ಕೊರೋನಾದಿಂದ ಗುಣಮುಖರಾಗಿ 220 ಜನ ಡಿಶ್ಚಾರ್ಜ್ ಆಗಿದ್ದು, ಈವರೆಗೆ ಕೊರೋನಾದಿಂದ ಗುಣಮುಖರಾದವರ ಸಂಖ್ಯೆ 4163ಕ್ಕೆ ಏರಿಕೆಯಾಗಿದೆ. ಇನ್ನೂ
ಇಂದು ಕೊರೋನಾ ಸೋಂಕಿನಿಂದ ಮತ್ತೆ 3 ಜನ ಸಾವಿಗೀಡಾಗಿದ್ದು, ಈವರೆಗೆ ಕೊರೋನಾ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಇನ್ನೂ ವಿಜಯಪುರ ಜಿಲ್ಲಾಸ್ಪತ್ರೆ, ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 817 ಜನರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಪಿ ಸುನೀಲಕುಮಾರ ಮಾಹಿತಿ ನೀಡಿದ್ದಾರೆ..