Site icon PowerTV

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಹುಬ್ಬಳ್ಳಿ : ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಭೂಸುಧಾರಣಾ ಕಾಯಿದೆ ತಿದ್ದುಪಡಿ ಖಂಡಿಸಿ ಹಾಗೂ ಕೊರೋನಾ ನಿಯಂತ್ರಣ ಹೆಸರಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ಕುರಿತು ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಿದರು.

ನಗರದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೊರೋನಾ ವೈರಸ್ ನಿಯಂತ್ರಣದ ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ವ್ಯಾಪಕವಾದ ಭ್ರಷ್ಟಾಚಾರ ನಡೆಸಿದ್ದು,ಈ ಕುರಿತು ಉಚ್ಚನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಇನ್ನೂ ಸರ್ಕಾರ ಜಾರಿಗೊಳಿಸಿದ ಕಾಯಿದೆಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಭೂಮಿ ಕಳೆದುಕೊಳ್ಳಲಿದ್ದಾರೆ. ಭೂ ದಲ್ಲಾಳಿಗಳು ಹಾಗೂ ರೀಯಲ್ ಎಸ್ಟೇಟ್ ಉದ್ಯಮಿಗಳು ರೈತರಿಗೆ ಹಣದ ಆಮಿಷ ತೋರಿಸಿ ರೈತರ ಭೂಮಿಯನ್ನು ಕಬಳಿಸಲಿದ್ದಾರೆ ಎಂದು ಆರೋಪಿಸಿದ ಅವರು, ಕೂಡಲೇ ರಾಜ್ಯ ಸರ್ಕಾರ ನಿರ್ಧಾರವನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

Exit mobile version