ವಿಜಯಪುರ : ಕುಂದಾನಗರಿ ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪೊಲೀಸರು ದೌರ್ಜನ್ಯದಿಂದ ಸ್ಥಳಾಂತರ ಮಾಡಿರುವುದನ್ನು ಖಂಡಿಸಿ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನಲ್ಲಿ ಹಾಲುಮತದ ಸಮಾಜದಿಂದ ಬಬಲೇಶ್ವರ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಮಾಜದ ಮುಖಂಡರುಗಳು ನಾಡು ಕಂಡ ಅಪ್ರತಿಮ ದೇಶಭಕ್ತ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಏಕಾಏಕಿ ಪೊಲೀಸರು ಸ್ಥಳಾಂತರ ಮಾಡಿದ್ದಾರೆ, ಇದನ್ನು ವಿರೋಧಿಸಿದ ಸಾರ್ವಜನಿಕರ ಮೇಲೆಯೂ ಹಲ್ಲೆ ಮಾಡಿ, ಪ್ರತಿಮೆಯನ್ನು ಸ್ಥಳಾಂತರ ಮಾಡಿದ್ದಾರೆ, ಇಂದು ದೇಶಭಕ್ತ ಸಂಗೊಳ್ಳಿ ರಾಯಣ್ಣ ಅವರಿಗೆ ಮಾಡಿದ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದೇಶಕ್ಕಾಗಿ ಹೋರಾಡಿದ ಹುತಾತ್ಮರನ್ನು ಸ್ಮರಿಸಬೇಕಾಗಿರುವ ಸರ್ಕಾರ ಹಾಗೂ ಅಧಿಕಾರಿಗಳು ಪ್ರತಿಮೆ ಸ್ಥಳಾಂತರ ಮಾಡುವ ಮೂಲಕ ಹುತಾತ್ಮರಿಗೆ ಅಗೌರವ ತೋರಿದ್ದಾರೆ, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವನ್ನು ಸರ್ಕಾರ ವಹಿಸಬೇಕಾಗಿದ್ದು, ಪ್ರತಿಮೆ ಸ್ಥಳಾಂತರ ಮಾಡುವಾಗ ಅಗೌರವ ತೋರಿದ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು..
ರಾಯಣ್ಣ ಪ್ರತಿಮೆ ಪುನಃ ಪ್ರತಿಷ್ಠಾಪಿಸಲು ಹಾಲುಮತ ಸಮಾಜದಿಂದ ಒತ್ತಾಯಿಸಿ ಪ್ರತಿಭಟನೆ
RELATED ARTICLES