ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವ್ಯಾಪ್ತಿಯಲ್ಲಿ ಬರುವ ಪಿರನವಾಡಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಶಕ್ತಿ ಸಂಘಟನೆ ನಗರದ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಬ್ರಿಟಿಷ್ರ ವಿರುದ್ಧ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿದ ನಾಡ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಅವರ ಜನ್ಮದಿನದಂದೆ ಕೆಲ ಕಿಡಿಗೇಡಿಗಳು, ಅಧಕಾರಿಗಳೊಡನೆ ಸೇರಿ ತೆರವುಗೊಳಿಸಿದ್ದು ಖಂಡನೀಯ. ಇದು ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳಿಗೆ ತೀವ್ರವಾಗಿ ನೋವುಂಟು ಮಾಡಿದ್ದು, ಕೂಡಲೇ ತೆರವುಗೊಳಿಸಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಬೇಕು. ತೆರವುಗೊಳಿಸಿದ ಪ್ರತಿಮೆಯನ್ನು ಪುನಃ ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪನೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
