ಮೈಸೂರು : ಘಟನೆ ನಡೆದು 5 ದಿನಗಳ ನಂತರ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭವಾಗಿದೆ. ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಘಟನೆ ನಡೆದು 4 ದಿನ ಕಳೆದರೂ ಸರ್ಕಾರದಿಂದ ತನಿಖೆಗೆ ಆದೇಶ ಬಂದಿಲ್ಲವೆಂದು ಪ್ರಾದೇಶಿಕ ಆಯುಕ್ತರು ನಿನ್ನೆ ಹೇಳಿಕೆ ಕೊಟ್ಟಿದ್ದರು. ಸರ್ಕಾರದ ವಿಳಂಬ ಧೋರಣೆ ಬಗ್ಗೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಕೊನೆಗೂ ಸರ್ಕಾರದ ಆದೇಶ ಬಂದಿದೆ ತೆನಿಖೆ ಶುರುವಾಗಿದೆ.
ನಂಜನಗೂಡಿನ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಗೆ ತನಿಖಾ ತಂಡ ಇಂದು ಭೇಟಿ ನೀಡಿದೆ.
ನಂಜನಗೂಡಿನಲ್ಲಿ ತನಿಖೆ ಚುರುಕುಗೊಂಡಿದ್ದು, ಪ್ರಾದೇಶಿಕ ಆಯುಕ್ತ ಡಾ.ಪ್ರಕಾಶ್ ನೇತೃತ್ವದ ತಂಡ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿದೆ. ನಂಜನಗೂಡಿನ ತಹಸೀಲ್ದಾರ್ ಮಹೇಶ್ ಕುಮಾರ್ ಜಿಲ್ಲಾ ಮುಖ್ಯ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಂಠ ರಾಜ್ ಅರಸ್ ಸೇರಿದಂತೆ ಇನ್ನಿತರ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ.
ಡಾ. ನಾಗೇಂದ್ರರವರು ಬಳಸಲಾಗಿದ್ದ ಕೆಲವು ದಾಖಲಾತಿಗಳನ್ನು ತನಿಖಾ ತಂಡ ವಶಪಡಿಸಿಕೊಂಡಿದೆ.
ಸತತ ಎರಡು ಗಂಟೆಗಳ ಕಾಲ ವೈದ್ಯಾಧಿಕಾರಿ ಕಚೇರಿಯಲ್ಲಿ ತನಿಖಾ ತಂಡ ಠಿಕಾಣಿ ಹೂಡಿ ಪ್ರಕ್ರಿಯೆ ಮುಂದುವರೆಸಿದೆ.