Site icon PowerTV

ಜೋಡಿ ಕೊಲೆ ಆರೋಪಿಗಳನ್ನ ಬಂಧಿಸಿದ ಹುಬ್ಬಳ್ಳಿ ಪೊಲೀಸರು.!

ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಧ್ಯರಾತ್ರಿ ನೆತ್ತರು ಹರಿಸಿ ಇಬ್ಬರು ಯುವಕರನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಪ್ರಕರಣ ನಡೆದ 24 ಗಂಟೆಗಳಲ್ಲಿಯೆ ಬಂಧಿಸುವಲ್ಲಿ ಕೇಶ್ವಾಪೂರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಗೋಪನಕೊಪ್ಪದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮಂಜುನಾಥ  ಹಾಗೂ‌ ನಿಯಾಜ ಜೋರಮ್ಮನವರ ಎಂಬುವವರನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿರುವ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿತರಾದ ಶ್ರೀನೀವಾಸ ಪರಶುರಾಮ ಹಿರೇಕುಂಬಿ (26) ಅವಿನಾಶ ಬಸವರಾಜ ನರಗುಂದ (29),ಸಂಜೀವ ರೇವಣಸಿದ್ದಪ್ಪ ವಡ್ಡರ (28), ಮಧು ಕಲ್ಮೇಶ ಹಾದಿಮನಿ(25) ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿದ ಬಗ್ಗೆ ಹುಬ್ಬಳ್ಳಿ ಕೇಶ್ವಾಪೂರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Exit mobile version