Monday, September 15, 2025
HomeUncategorizedಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ - ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಮೇಣದಬತ್ತಿ ಹಚ್ಚಿ...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ – ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ಮೇಣದಬತ್ತಿ ಹಚ್ಚಿ ಶ್ರದ್ಧಾಂಜಲಿ

ಶಿವಮೊಗ್ಗ : ದೇಶದ ಮಾಜಿ ರಾಷ್ಟ್ರಪತಿಗಳು, ಭಾರತರತ್ನ ಮಾಜಿ ವಿದೇಶಾಂಗ ಸಚಿವರು ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ದಿಗಳಾದ ಪ್ರಣಬ್ ಮುಖರ್ಜಿ ಇನ್ನಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಸದಸ್ಯರು, ಸಂತಾಪ ಸೂಚಿಸಿ, ಶ್ರದ್ಧಾಂಜಲಿ ನೆರವೇರಿಸಿದರು. ನಗರದ ಗೋಪಿ ವೃತ್ತದಲ್ಲಿ ಪ್ರಣಬ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ಮೇಣದ ದೀಪ ಬೆಳಗಿ ಅಗಲಿದ ನಾಯಕನಿಗೆ ಗೌರವ ಸಮರ್ಪಿಸಿದರು. ಈ ವೇಳೆ, ಒಂದು ನಿಮಿಷಗಳ ಕಾಲ ಮೌನಾಚರಣೆ ನೆರವೇರಿಸಿ, ಸಂತಾಪ ಸೂಚಿಸಿದ ಕಾಂಗ್ರೆಸ್ ಯುವಕರು ಅಗಲಿದ ಕಾಂಗ್ರೆಸ್ ನ ಹಿರಿಯ ಮುತ್ಸದ್ಧಿಗೆ ಗೌರವ ಸಮರ್ಪಿಸಿದರು. ಈ ವೇಳೆ, ಯುವ ಕಾಂಗ್ರೆಸ್ ಮುಖಂಡರು ಮತ್ತು ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments