Site icon PowerTV

‘ಎರಡನೇ  ಹಂತದ ಚುನಾವಣೆಗೆ 3780ನಾಮಪತ್ರ ಸಲ್ಲಿಕೆ’: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಎರಡನೇ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವದಿ ಮುಗಿದಿದ್ದು,  ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ ಮತ್ತು ನವಲಗುಂದ ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯತಗಳಿಗೆ  ಒಟ್ಟು 3780 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ‌ ನಿತೇಶ ಪಾಟೀಲ ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಕೊನೆಯ ದಿನವಾದ ನಿನ್ನೆ (ಡಿ.16)  ಹುಬ್ಬಳ್ಳಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಗಳಿಗೆ 629 , ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಯತಿಗಳಿಗೆ  125,  ಕುಂದಗೋಳ ತಾಲೂಕಿನ ಗ್ರಾಮ ಪಂಚಾಯತಗಳಿಗೆ  463 ಮತ್ತು ನವಲಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ 347  ಸೇರಿದಂತೆ ಒಟ್ಟು 1564 ನಾಮಪತ್ರಗಳು  ಸಲ್ಲಿಕೆ ಆಗಿವೆ ಎಂದು ಅವರು ತಿಳಿಸಿದ್ದಾರೆ.

ಎರಡನೆಯ ಹಂತದಲ್ಲಿ ಗ್ರಾಮ ಪಂಚಾಯತ ಸಾರ್ವತ್ರಿಕ ಚುನಾವಣೆಗೆ ಅಧಿಸೂಚನೆ ಹೊರಡಿಸಿದ ಡಿಸೆಂಬರ್‌ 11 ರಿಂದ  ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ  ಡಿಸೆಂಬರ್ 16 ವರೆಗೆ  ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ ಮತ್ತು ನವಲಗುಂದ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಒಟ್ಟು 3780  ಅಭ್ಯರ್ಥಿಗಳು ತಮ್ಮ ನಾಮಪತ್ರಗಳ ಉಮೇದುವಾರಿಕೆ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Exit mobile version