Site icon PowerTV

‘ನಿರಂತರ ಕಾಂಗ್ರೆಸ್ ಸಂಪರ್ಕದಲ್ಲಿರುವ ಶಾಸಕ ಶರತ್ ಬಚ್ಚೇಗೌಡ’

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕ್ಷೇತ್ರದ ಸ್ವಾಭಿಮಾನಿ ಪಕ್ಷದ ಶಾಸಕ ಶರತ್ ಬಚ್ಚೇಗೌಡ ಅವರು ನಿರಂತರವಾಗಿ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಇನ್ನೂ ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಮಾಜಿ ಸಚಿವ ಕೃಷ್ಣಭೈರೇಗೌಡ ಮತ್ತು ಎಂಎಲ್ಸಿ ರವಿ ಅವರ ಜೊತೆ ಭೇಟಿ ನೀಡಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ಬಿಡಿಸಿಸಿ ಬ್ಯಾಂಕ್ ನ ಚುನಾವಣೆ ಬಗ್ಗೆ ಚರ್ಚೆ ನಡೆಸಿದ್ದಾರೆ.

ಶಾಸಕ ಶರತ್ ಬಚ್ಚೇಗೌಡ ಅವರು ಇನ್ನೂ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗದಿದ್ದರೂ ನಿರಂತರವಾಗಿ ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಂಟಿಬಿ ನಾಗರಾಜ್ ಅವರನ್ನು ಮಣಿಸಲು ಶರತ್ ಬಚ್ಚೇಗೌಡ ಮತ್ತು ಕಾಂಗ್ರೆಸ್ ಪಕ್ಷ ತಂತ್ರ ರೂಪಿಸುತ್ತಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ ಆಗಿಲ್ಲ ಅನ್ನೋದು ಎಲ್ಲರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ. ಕೇವಲ ಗ್ರಾಮ ಪಂಚಾಯಿತಿ ಚುನಾವಣೆಗೆ ಮಾತ್ರ ಕಾಂಗ್ರೆಸ್ ಜೊತೆ ಕೈ ಜೋಡಿಸಲಾಗಿದ್ಯಾ ಅನ್ನೋ ಮಾತುಗಳು ಸಹ ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.

Exit mobile version