Site icon PowerTV

ನಾನು ಸಿದ್ದರಾಮಯ್ಯ ಅವರ ಋಣದಲ್ಲಿ ಇಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಬಿಗ್ ವಾಕ್ ವಾರ್ ನಡೆಯುತ್ತಿದೆ. ಬಿಜೆಪಿ ಜೊತೆ ಜೆಡಿಎಸ್ ವಿಲಿನ್ನ ಆಗುತ್ತಾ ಅನ್ನೋ ಹಿನ್ನಲೆಯಲ್ಲಿ ಸಿದ್ದರಾಮಯ್ಯ ವಿರುದ್ದ ಹೆಚ್ ಡಿ ಕುಮಾರ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.  

ನಾನು ಸಿದ್ದರಾಮಯ್ಯ ಅವರ ಋಣದಲ್ಲಿ ಇಲ್ಲ. ಸಿದ್ದರಾಮಯ್ಯ ಅವರೇ ನನ್ನ ಋಣದಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 2004 ರಲ್ಲಿ ನಿಮ್ಮನ್ನು ಅಧಿಕಾರಕ್ಕೆ ತರಲು ನನ್ನ ಶ್ರಮ ಇದೆ. ನನ್ನನ್ನು ಮುಖ್ಯಮಂತ್ರಿ ಮಾಡಲು ನಿಮ್ಮ ದುಡಿಮೆ ಇಲ್ಲ. ಸಿದ್ದರಾಮಯ್ಯ ಈ ಸ್ಥಾನಕ್ಕೆ ಬರಲು ನನ್ನ ದುಡಿಮೆ ಇದೆ ಎಂದರು.

2004 ರಲ್ಲಿ ನನ್ನ ಆರ್ಥಿಕ ಶಕ್ತಿಯನ್ನು ಬಳಸಿ ನಿಮ್ಮನ್ನು ಡಿಸಿಎಂ ಮಾಡಿದ್ದೇನೆ. ಹೋಟೆಲ್ ನಲ್ಲಿ ಆಡಳಿತ ಮಾಡಿದ್ದೇನೆಂದು ಲಘುವಾಗಿ ಹೇಳಬೇಡಿ. ನಾನು ಬಿಜೆಪಿಯ ಬಿ ಟೀಮ್ ಆಗಿದ್ರೆ ‘ಕೈ’ ಜೊತೆ ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರ ಸ್ವಾಮಿ ಗುಡುಗಿದ್ದಾರೆ.

ಜೆಡಿಎಸ್ ಯಾವ ಪಕ್ಷದ ಜೊತೆ ವಿಲಿನ್ನ ಮಾಡುವುದಿಲ್ಲ. ಕಾಂಗ್ರೆಸ್ ನಿಂದ ನಿರಂತರವಾಗಿ ಜೆಡಿಎಸ್ ಕತ್ತು ಹಿಸುಕುವ ಪ್ರಯತ್ನ ಮಾಡುತ್ತಿದೆ. ಆ ಕಾರಣಕ್ಕೆ ಅನಿವಾರ್ಯವಾಗಿ ಕೆಲವು ನಿರ್ಧಾರ ಮಾಡಿದ್ದೇವೆ. ಜೆಡಿಎಸ್ ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರ ಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.  

Exit mobile version