Site icon PowerTV

ಎರಡು ವರ್ಷ ಕಾಯಿರಿ ಅಧಿಕಾರಕ್ಕೆ ಬರುತ್ತೇವೆ: ಮಾಜಿ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿಯೂ ಆಪರೇಷನ್ ಕಮಲ ಮಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಎಮ್ ಯಡಿಯೂರಪ್ಪ ಅವರ ವಿರುದ್ಧ ಬಾದಾಮಿಯಲ್ಲಿ ವಾಗ್ಧಾಳಿ ನಡೆಸಿದ್ದಾರೆ.

ನಾನು ಅಸೆಂಬ್ಲಿಯೊಳಗೆ, ಹೊರಗೆ ರಾಜಕೀಯ ಭಾಷಣದಲ್ಲಿ ನೂರಕ್ಕೆ ನೂರು ಸತ್ಯ ಹೇಳುತ್ತೇನೆ. ಬಿಜೆಪಿ ಸರ್ಕಾರ ಇದೊಂದು ಕೆಟ್ಟ ಸರ್ಕಾರ. ಇನ್ನೂ ಎರಡು ವರ್ಷ ಕಾಯಿರಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಸಿದ್ದಾರಮಯ್ಯ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬರೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಕಳೆದ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿತ್ತು ಏನೇನೋ ಕಾರಣಕ್ಕೆ ಬರಲ್ಲಿಲ್ಲ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಹೇಳಿದ್ದಾರೆ.

 

 

Exit mobile version