Site icon PowerTV

‘ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲು’

ಬೆಂಗಳೂರು: ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂಬ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರವಿ ಕುಶಾಲಪ್ಪ ಎಫ್ ಐ ಆರ್ ದಾಖಲಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೊಡವರು ಗೋ ಮಾಂಸ ತಿನ್ನುತ್ತಾರೆ ಎಂದು ಹೇಳಿ, ಕೊಡವರ ಸಂಸ್ಕೃತಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ಪಶ್ಚಿಮ ಘಟ್ಟ ಸಂರಕ್ಷಣಾ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಅನ್ವಯ ಕೇಸ್ ದಾಖಲಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆ ಕೇಳಿದರೂ ನಾವು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

Exit mobile version