Site icon PowerTV

ಬಿಜೆಪಿಗೆ ಆಗದೇ ಇರುವುದು ಕಾಂಗ್ರೆಸ್ಸಿನಿಂದ ಸಾಧ್ಯ: ಈಶ್ವರ ಖಂಡ್ರೆ

ಹುಬ್ಬಳ್ಳಿ: ಬಿಜೆಪಿಯಿಂದ ಸ್ಥಿರವಾದ ಸರ್ಕಾರ ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಬಿಜೆಪಿ ವಿರುದ್ಧ ಕಿಡಿ ಕಾರಿದರು.

ನಗರದಲ್ಲಿಂದು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಉಪಚುನಾವಣೆಗೆ ಅಭ್ಯರ್ಥಿಗಳ ಅಯ್ಕೆ ನಡೆದಿದೆ. ಇನ್ನೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬರಲಿದೆ ಎಂದರು. ವಿಭಾಗ ಮಟ್ಟದ ಸಮಾವೇಶ ನಡೆಸುತ್ತಿದ್ದೇವೆ. ಪಕ್ಷವನ್ನ ತಳಮಟ್ಟದಿಂದ ಸಂಘಟನೆ ಮಾಡಬೇಕಿದೆ. ಹೀಗಾಗಿ ರಾಜ್ಯದಲ್ಲಿ ಸಮಾವೇಶ ಮಾಡಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

Exit mobile version