Monday, September 15, 2025
HomeUncategorized'ರಾಜ್ಯ ಮುಖಂಡರ ಜೊತೆ ಕಾಂಗ್ರೆಸ್ ಉಸ್ತುವಾರಿ ಸರ್ಜೆವಾಲಾ ವಿಡಿಯೋ ಸಂವಾದ'

‘ರಾಜ್ಯ ಮುಖಂಡರ ಜೊತೆ ಕಾಂಗ್ರೆಸ್ ಉಸ್ತುವಾರಿ ಸರ್ಜೆವಾಲಾ ವಿಡಿಯೋ ಸಂವಾದ’

ಹುಬ್ಬಳ್ಳಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ರಾಷ್ಟ್ರ ಹಾಗೂ ರಾಜ್ಯದ ನಾನಾ ಜ್ವಲಂತ ಸಮಸ್ಯೆಗಳು, ಪಕ್ಷ ಸಂಘಟನೆ, ಬಲವರ್ಧನೆ, ಹೋರಾಟದ ಹಾದಿ ಕುರಿತು ದೆಹಲಿಯಿಂದ ಕರ್ನಾಟಕದ ಪಕ್ಷದ ಮುಖಂಡರೊಂದಿಗೆ  ವಿಡಿಯೋ ಸಂವಾದ ನಡೆಸಿದರು.

ಹುಬ್ಬಳ್ಳಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಪಾಲ್ಗೊಂಡಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕರಾದ ಶಿವಾನಂದ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಹಂತೇಶ್  ಕೌಜಲಗಿ, ಪ್ರಸಾದ್ ಅಬ್ಬಯ್ಯ ಕುಸುಮಾ ಶಿವಳ್ಳಿ, ಎಂಎಲ್ಸಿಗಳಾದ ಬಿ.ಕೆ. ಹರಿಪ್ರಸಾದ್, ಶ್ರೀನಿವಾಸ್ ಮಾನೆ, ಪ್ರಕಾಶ್ ರಾಥೋಡ್, ಮಾಜಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ, ಮಾಜಿ ಸಂಸದ ಚಂದ್ರಪ್ಪ, ಕೆಪಿಸಿಸಿ ಮಾಧ್ಯಮ ವಿಭಾಗದ ಉಪ ಮುಖ್ಯಸ್ಥ ವಿ.ಆರ್. ಸುದರ್ಶನ್ ಮತ್ತಿತರ ಮುಖಂಡರು ಉಪಸ್ಥಿತದ್ದರು.

ಸಿಡಬ್ಲೂಸಿ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಮಾರ್ಗರೇಟ್ ಆಳ್ವ, ರೆಹಮಾನ್ ಖಾನ್ ಮತ್ತಿತರ ಹಿರಿಯ ಮುಖಂಡರು ತಮ್ಮ ಸ್ಥಳಗಳಿಂದ ಈ ಸಂವಾದದಲ್ಲಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments