Site icon PowerTV

‘ಕೇಂದ್ರ ಗೃಹ ಸಚಿವರ ಆಗಮನಕ್ಕೆ ರೈತರ ವಿರೋಧ’

ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ. ಕೇಂದ್ರದ ಹೊಸ ಕೃಷಿ ಕಾಯ್ದೆಗೆ ರೈತರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೇಂದ್ರದ ಹೊಸ ಕೃಷಿ ಕಾಯ್ದೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡಲಿ ಎಂದು ರೈತರು ಆಗ್ರಹಿಸಿದ್ದಾರೆ.

ಡಿಸಿ ಕಚೇರಿ ಮುಂದೆ ಸಾಮಾಜಿಕ ಕಾರ್ಯಕರ್ತರು ಕೊವಿಡ್ ನಿಯಮ ಗಾಳಿಗೆ ತೂರಿ ಬಿಜೆಪಿ ಸಮಾವೇಶ ನಡೆಸುತ್ತಿದ್ದಾರೆ. ಜನಸಾಮಾನ್ಯರಿಗೆ ಒಂದು ನಾಯ್ಯ, ರಾಜಕಾರಣಿಗಳಿಗೆ ಒಂದು ನ್ಯಾಯ ಎಂದು ಡಿಸಿ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಡಳಿತದ ಪರವಾನಗಿ ಇಲ್ಲದೇ ಜನಸೇವಕ ಸಮಾವೇಶವನ್ನು ಆಯೋಜನೆ ಮಾಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಲಕ್ಷಾಂತರ ಜನಸೇರಿಸಿ  ಬಿಜೆಪಿ ನಾಯಕರು ಸಮಾವೇಶ ಮಾಡುತ್ತಿದ್ದಾರೆ. ತಾವೇ ಮಾಡಿದ ನಿಯಮ ಗಾಳಿಗೆ ತೂರಿದಂತೆ ಅಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ರೈತರು ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡಿ, ಚಲೇ ಜಾವ್.. ಅಮಿತ್ ಶಾ ಚಲೇ ಜಾವ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

 

Exit mobile version