Site icon PowerTV

‘ರೈತರ ಹೋರಾಟ ಬೆಂಬಲಿಸಿ ರಾಜಭವನ ಮುತ್ತಿಗೆ ಹಾಕಲು ಕೈ ರಣತಂತ್ರ’​

ಬೆಂಗಳೂರು: ರೈತರ ಹೋರಾಟಕ್ಕೆ ಬೆಂಬಲ ನೀಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನವರಿ 20 ರಂದು ಬೆಂಗಳೂರು ಸ್ತಬ್ಧ ಮಾಡುಲು ಪ್ಲಾನ್ ಮಾಡಿಕೊಂಡಿದೆ.

ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಜನವರಿ 20 ರಂದು ರೈಲ್ವೆ ನಿಲ್ದಾಣದಿಂದ ರಾಜಭವನದವರೆಗೂ ಪ್ರತಿಭಟನೆಯನ್ನು ನಡೆಸಲಿದೆ.  ರೈತರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡಿ, ರಾಜಭವನಕ್ಕೆ ಮುತ್ತಿಗೆ ಹಾಕಲು ಕೈ ರಣತಂತ್ರ ಮಾಡಿದೆ. ಪ್ರತಿಭಟನೆಯಲ್ಲಿ 10 ಸಾವಿರ ಜನರನ್ನು ಸೇರಿಸಲು ಕಾಂಗ್ರೆಸ್ ಯತ್ನಿಸುತ್ತಿದೆ. ಸುತ್ತ-ಮುತ್ತಲಿನ ಜಿಲ್ಲೆಗಳಲ್ಲಿನ ಜನರನ್ನು ಸೇರಿಸುವ ಯತ್ನ. ಹೋರಾಟದ ಸ್ವರೂಪವನ್ನು ನಿರ್ಧರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವರ್ಚುವಲ್ ಸಭೆಯನ್ನು ನಡೆಸಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

Exit mobile version