Site icon PowerTV

ಸಚಿವ ಡಾ.‌ಸುಧಾಕರ್ ಕಾರಿಗೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಕರವೇ ಕಾರ್ಯಕರ್ತರ ಆಕ್ರೋಶ

ಹುಬ್ಬಳ್ಳಿ : ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ಗೆ ಕರವೇ ಕಾರ್ಯಕರ್ತರು ಕಪ್ಪು ಬಟ್ಟೆ ತೋರಿಸಿ, ಘೇರಾವ್ ಹಾಕಿದ ಘಟನೆ  ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ. ಕರವೇ  ರಾಜ್ಯಾಧ್ಯಕ್ಷ ನಾರಾಯಣಗೌಡ ಯಾರು ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ಅವರ ಬಗ್ಗೆ ಸಚಿವ ಸುಧಾಕರ್ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಸಚಿವರ ಕಾರಿಗೆ ಘೇರಾವ್ ಹಾಕಿ ಕಪ್ಪು ಬಟ್ಟೆ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು. ‌ಈ ವೇಳೆ ಸಚಿವರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.ಕೂಡಲೇ ನಾರಾಯಣಗೌಡ ಅವರನ್ನ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.‌

Exit mobile version