Site icon PowerTV

‘ಗ್ರಾಮ ಪಂಚಾಯತ ಸದಸ್ಯರ ಕಾರು ತಡೆದು ಗ್ರಾಮಸ್ಥರ ವಿರೋಧ’

ಬೆಳಗಾವಿ: ಬೆಳಗಾವಿ ಜಿಲ್ಲೆ ನಂಜಿನಕೊಡಲ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಹೈಡ್ರಾಮಾ ನಡೆದಿದೆ. ಮತದಾನಕ್ಕೆ ಆಗಮಿಸಿದ ಗ್ರಾಮ ಪಂಚಾಯತಿ ಸದಸ್ಯರ ಕಾರು ತಡೆದು ಜುಂಜವಾಡ ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿದ್ದಾರೆ.

ನಿನ್ನೆ  ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದಿತ್ತು. ಸಾಗರೆ ಗ್ರಾಮದ ಜಾನವ್ ಪಾಟೀಲ್  ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಜಯಶ್ರೀ ಶಿಂಧೋಳಕರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಧ್ಯಕ್ಷರಾಗಿ ಜಾನವ್ ಪಾಟೀಲ್ ಬೆಂಬಲಿಸಿದ್ದಕ್ಕೆ ಮತ್ತೊಂದು ಗುಂಪಿನವರು ವಿರೋಧ ವ್ಯಕ್ತಪಡಿಸಿ ಜುಂಜವಾಡ ಗ್ರಾಮದ ಅಭ್ಯರ್ಥಿಯನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ಪಟ್ಟು ಹಿಡಿದಿದ್ದರು. ಈ ಸಂಬಂಧ ಕಾರು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಲಘು ಲಾಠಿ ಚಾರ್ಚ್‌ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.

Exit mobile version