Site icon PowerTV

‘ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ದಂಡಯಾತ್ರೆ’

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ರಾಜ್ಯದಲ್ಲಿ ಪ್ರವಾಸ ಮಾಡಲಿದ್ದಾರೆ. ಚುನಾವಣೆ ರಾಜ್ಯಗಳಾದ ತಮಿಳುನಾಡು, ಕೇರಳ ರಾಜ್ಯಕ್ಕೆ  ತೆರಳಲಿದ್ದಾರೆ.

ಮೊದಲಿಗೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸಂಚಾರ ಮಾಡಲಿದ್ದಾರೆ. ಸ್ವದೇಶಿ ನಿರ್ಮಿತ ಯುದ್ಧ ಟ್ಯಾಕಂರ್ ಅರ್ಜುನ್ ಸೇನೆಗೆ ಅರ್ಪಣೆ ಮಾಡಿ, ನಂತರ ಚೈನ್ನೈನಲ್ಲಿ ಮೆಟ್ರೋ ರೈಲು ಯೋಜನೆಗೆ ಶಂಕು ಸ್ಥಾಪನೆ ಮಾಡಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ.  ಚೆನ್ನೈನ ನೆಹರು ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಎಂಜಿಆರ್, ಜಯಲಲಿತಾ ಫೋಟೋಗೆ ಮೋದಿ ಪುಷ್ಪನಮನ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಕೃಷ್ಣನ ಸ್ಮರಣಿಕೆ ನೀಡಿ ಸನ್ಮಾನ ಮಾಡಲಾಗುತ್ತದೆ.

ಚೈನ್ನೈ ಕಾರ್ಯಕ್ರಮದ ಬಳಿಕ ಕೇರಳ ಪ್ರವಾಸಕ್ಕೆ ತೆರಳಲಿದ್ದಾರೆ. ಕೇರಳದಲ್ಲಿ ವಿವಿಧ ಅಭಿವೃದ್ಧಿ ಯೋಜನೆಯನ್ನು ಉದ್ಘಾಟಿಸಲಿದ್ದಾರೆ.

 

Exit mobile version