Site icon PowerTV

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ: ಈಶ್ವರಪ್ಪ

ವಿಜಯಪುರ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು ಬುದ್ಧಿ ಬಂದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯಪುರದಲ್ಲಿ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಹೋದಲೆಲ್ಲಾ ಮುಂದಿನ ಸಿಎಂ ನಾನೇ ಅಂತಾ ಹೇಳ್ತಾರೆ. ಸಿದ್ದರಾಮಯ್ಯ ಹಗಲು-ರಾತ್ರಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಆಸೆ ಈಡೇರಲ್ಲ. ಹಾಗೆ ಹೇಳಬೇಡಿ ಎಂದು ಡಿಕೆ ಶಿವಕುಮಾರ್ ಹೇಳಿದರು ಅವರು ಕೇಳುತ್ತಿಲ್ಲ ಎಂದರು.

ಸಿದ್ದರಾಮಯ್ಯರನ್ನು ನಂಬಬಾರದು ಅಂತ ಜನ ನಿರ್ಧಾರ ಮಾಡಿದ್ದರು. ಅದಕ್ಕೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನ ಅವರನ್ನು ಸೋಲಿಸಿದ್ದಾರೆ ಎಂದು ವಿಜಯಪುರದಲ್ಲಿ ಈಶ್ವರಪ್ಪ ಹೇಳಿದರು.

 

Exit mobile version