Site icon PowerTV

ರಮೇಶ್ ಜಾರಕಿಹೊಳಿ ಬೆಂಬಲಿಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯಗೆ ಯತ್ನ

ಗೋಕಾಕ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜಿನಾಮೆ ಹಿನ್ನಲೆಯಲ್ಲಿ ಇಂದು ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಟೈರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಟೈರ್ ಗೆ ಹಚ್ಚಿ ಪ್ರತಿಭಟನೆ ಮಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಬೆಂಬಲಿಗರು  ಗೋಕಾಕ್ –ಧಾರವಾಡ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಬೆಂಬಲಿಗ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾನೆ. ರಮೇಶ್ ಜಾರಕಿಹೊಳಿ ಬೆಂಬಲಿಗನನ್ನು ಪೊಲೀಸರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Exit mobile version