Site icon PowerTV

‘ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ’

ಶಿವಮೊಗ್ಗ: ಮೂರು ಉಪಚುನಾವಣೆಗಳ ಬಳಿಕ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ, ಇಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 

ಯತ್ನಾಳ್ ಗೆ ಹೇಳುವ ಶಕ್ತಿ ಇರಬಹುದು. ಆದರೆ, ಯಾವ ಮೂಲದಿಂದ ಯತ್ನಾಳ್ ಈ ಹೇಳಿಕೆ ನೀಡುತ್ತಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದಿದ್ದಾರೆ. ಆದರೆ, ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಈ ಮೂರು ಉಪಚುನಾವಣೆಗಳನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನ ಈಶ್ವರಪ್ಪ ವ್ಯಕ್ತಪಡಿಸಿದ್ದಾರೆ.  ನಿರೀಕ್ಷೆಗೆ ಮೀರಿ ಮಸ್ಕಿಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಿದೆ. ಡಿ.ಕೆ. ಶಿವಕುಮಾರ್, ಮತ್ತು ಸಿದ್ಧರಾಮಯ್ಯ ಇಬ್ಬರೂ ಮುಖ್ಯಮಂತ್ರಿಯಾಗಬೇಕೆಂದು ಬಡಿದಾಡಿಕೊಳ್ಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯತ್ನಾಳ್, ಯಾವ ಮೂಲದಿಂದ ಮಾತನಾಡುತ್ತಿದ್ದಾರೋ ಗೊತ್ತಿಲ್ಲ. ಯಡಿಯೂರಪ್ಪ ಬದಲಾವಣೆ ಆಗ್ತಾರೋ ಬಿಡ್ತಾರೋ ಅದು ಕೂಡ ನನಗೆ ಗೊತ್ತಿಲ್ಲ ಅಂತಾ ಈಶ್ವರಪ್ಪ ಹೇಳಿದ್ದಾರೆ.

 

Exit mobile version