Site icon PowerTV

ಸಂತ್ರಸ್ತೆ ಯುವತಿಗೆ ಸರ್ಕಾರ ರಕ್ಷಣೆ ನೀಡಬೇಕು: ಸಿದ್ದರಾಮಯ್ಯ

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಹಿನ್ನಲೆಯಲ್ಲಿ  ಸದನದಲ್ಲಿ ಹೋರಾಟ ಮುಂದುವರಿಸಬೇಕೆಂದು ಕಾಂಗ್ರೆಸ್ ತೀರ್ಮಾನಿಸಿದ್ದು,  ನ್ಯಾಯಾಂಗ ತನಿಖೆ ಮಾಡಬೇಕೆಂದು  ಮಾಜಿ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಆಗ್ರಹಿಸಿದ್ದಾರೆ.

ಸಂತ್ರಸ್ತೆ ಯುವತಿಗೆ ಸರ್ಕಾರ ರಕ್ಷಣೆ ಕೊಡಬೇಕು. ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡದ ಮೇಲೆ ನಾವೇಕೆ ಸದನಕ್ಕೆ ಬರಬೇಕು. ಕೋರ್ಟ್ ಗೆ ಹೋದ ಆರು ಸಚಿವರು ರಾಜೀನಾಮೆ ಕೊಡಬೇಕು. ಕೂಡಲೇ ಯುವತಿಯ ಹೇಳಿಕೆಯನ್ನು ಆಧರಿಸಿ ಎಫ್ ಐಆರ್ ದಾಖಲಿಸಿಕೊಂಡು,  ಹೈಕೋರ್ಟ್​​ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕೆಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

Exit mobile version