Tuesday, September 16, 2025
HomeUncategorizedವಿದ್ಯಾನಗರ ಬ್ಲಾಕ್ ಕಾಂಗ್ರೆಸ್​ಗೆ ರಜತ ಅಧ್ಯಕ್ಷ

ವಿದ್ಯಾನಗರ ಬ್ಲಾಕ್ ಕಾಂಗ್ರೆಸ್​ಗೆ ರಜತ ಅಧ್ಯಕ್ಷ

ಹುಬ್ಬಳ್ಳಿ : ವಿದ್ಯಾನಗರ ಬ್ಲಾಕ್ ಕಾಂಗ್ರೆಸ್​ ಅಧ್ಯಕ್ಷರಾಗಿ ರಜತ ಉಳ್ಳಾಗಡ್ಡಿಮಠ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಈ ನೇಮಕ ಮಾಡಿದ್ದಾರೆ. ರಜತ ಅವರು ಈ ಹಿಂದೆ ವಿದ್ಯಾರ್ಥಿ ಕಾಂಗ್ರೆಸ್​ನ ರಾಷ್ಟ್ರೀಯ ಹಾಗೂ ಜಿಲ್ಲಾ ಸಂಯೋಜಕರಾಗಿ, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಸಂಯೋಜಕರಾಗಿ ಕೆಲಸ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್​ ಸಮಿತಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ರಜತ ಅವರು ವಿದ್ಯಾರ್ಥಿ ಸಂಘಟನೆಯ ಮೂಲಕ ಬಹು ದೊಡ್ಡ ಯುವ ಪಡೆಯನ್ನು ಹೊಂದಿದ್ದಾರೆ. ಸಂಘಟನೆ ಹಾಗೂ ನಾಯಕತ್ವ ಗುಣವನ್ನು ನೋಡಿ ರಜತ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಪಕ್ಷದ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments