Site icon PowerTV

‘ಕುತೂಹಲ ಮೂಡಿಸಿರುವ ಬಿಜೆಪಿ ಶಾಸಕ ಅರವಿಂದ್​ ಬೆಲ್ಲದ್​ ದೆಹಲಿ ಭೇಟಿ’

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ತಣ್ಣಗಾಯ್ತು ಎನ್ನುವಾಗಲೇ ಮತ್ತೆ ನಾಯಕತ್ವ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ. ತಡರಾತ್ರಿ ಅರವಿಂದ್ ಬೆಲ್ಲದ್ ದೆಹಲಿಗೆ ಭೇಟಿ ನೀಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೆಹಲಿಗೆ ಅರುಣ್ ಸಿಂಗ್ ಭೇಟಿಯಾಗಲು ಹೋಗಿದ್ದಾರಾ ಅಥವಾ ಹೈಕಮಾಂಡ್ ಬುಲಾವ್ ನೀಡಿತ್ತಾ ಎಂದು ರಾಜ್ಯದಲ್ಲಿ ರಾಜಕೀಯದಲ್ಲಿ ಮತ್ತೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

ಜೂನ್ 16 ರಂದು ರಾಜ್ಯಕ್ಕೆ ಅರುಣ್ ಸಿಂಗ್ ಆಗಮಿಸಲಿದ್ದಾರೆ. ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮೊದಲೇ ಅರವಿಂದ್ ಬೆಲ್ಲದ್ ದೆಹಲಿಗೆ ಭೇಟಿ ನೀಡಿದ್ದಾರೆ. ನಿನ್ನೆಯಷ್ಟೇ ನಾನೇ ಇನ್ನೂ ಮುಂದಿನ ಎರಡು ವರ್ಷ ರಾಜ್ಯದಲ್ಲಿ ಸಿಎಂ ಆಗಿರುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಎಸ್ ವೈ ಹೇಳಿಕೆ ಬೆನ್ನಲೇ ಅರುಣ್ ಸಿಂಗ್ ರನ್ನು ಅರವಿಂದ್ ಬೆಲ್ಲದ್ ಭೇಟಿಯಾಗಲಿರುವುದು ತೀವ್ರ ಕುತೂಹಲ ಮೂಡಿಸಿದೆ.   

Exit mobile version