Site icon PowerTV

ಮುಂದುವರಿದ ಬಿಜೆಪಿ ಮುಖಂಡರ ಮೇಲೆ ಗುಂಡಿನ ದಾಳಿ

ನವದೆಹಲಿ: ಜಮ್ಮು-ಕಾಶ್ಮೀರ ಮತ್ತು ಉತ್ತರ ಪ್ರದೇಶದ ಬಿಜೆಪಿ ಮುಖಂಡರ ಮೇಲೆ ಗುಂಡಿನ ದಾಳಿ ನಡೆಸಿದ್ದ ದುಷ್ಕರ್ಮಿಗಳು, ಮತ್ತೆ ತಮ್ಮ ಕ್ರೌರ್ಯ ಮುಂದುವರಿಸಿದ್ದಾರೆ. ಮತ್ತೊಮ್ಮೆ ಉತ್ತರ ಪ್ರದೇಶದ ಪ್ರಯಾಗ್ ರಾಜ್​ನಲ್ಲಿ ಮತ್ತೊಬ್ಬ ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಅಜಯ್ ಶರ್ಮಾ ವಯಸ್ಸು (35) ದಾಳಿಗೆ ಒಳಗಾದ ಮುಖಂಡ. ಈತನ ಮೇಲೆ ನಡೆದ ದಾಳಿಯಿಂದಾಗಿ ಸ್ಥಿತಿ ಗಂಭೀರವಾಗಿದೆ. ಸುಮಾರು ಐದು ಸುತ್ತು ಗುಂಡಿನ ದಾಳಿ ನಡೆಸಲಾಗಿದೆ. ಇದರಿಂದ ತೋಳು ಮತ್ತು ಹೊಟ್ಟೆಗೆ ಗಂಭೀರ ಗಾಯಗಳಾಗಿವೆ. ಅಜಯ್ ಶರ್ಮಾ ಬಿಜೆಪಿ ಜಿಲ್ಲಾ ಕಿಸಾನ್ ಮೋರ್ಚಾದ ಉಪಾಧ್ಯಕ್ಷರಾಗಿ ಕೆಲಸ ನಿರ್ವಹಿಸ್ತಿದ್ರು. ನಿನ್ನೆ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆರು ಜನ ಅಪರಿಚಿತರು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಆ ಸಮಯದಲ್ಲಿ ತಪ್ಪಿಸಿಕೊಂಡು ಬಂದ ಶರ್ಮಾ ಮನೆಗೆ ಬರುವ ಘಳಿಗೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂತೋಷ್ ಹೊಸಹಳ್ಳಿ, ಪವರ್ ಟಿವಿ, ನವದೆಹಲಿ

Exit mobile version