ಬೆಂಗಳೂರು : ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಇಂದು ಮಾಧ್ಯಮದ ಮುಂದೆ ಕೃಷಿ ಕಾಯ್ದೆ ರದ್ದುಪಡಿಸಿದ ಬೆನ್ನಲ್ಲೇ ಟ್ವಿಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ ಮತ್ತು ಈಗ ಏಕಾಏಕಿ ರದ್ಧತಿಯು ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನದಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದ್ದಾರೆ ಎಂದಿದ್ದಾರೆ.
ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ.1/4
— H D Kumaraswamy (@hd_kumaraswamy) November 19, 2021