Site icon PowerTV

ಲಕ್ಷ್ಮಿಗೆ ಟಕ್ಕರ್ ಕೊಟ್ಟ ಸಾಹುಕಾರ್ :  ಬಿಜೆಪಿ ತೆಕ್ಕೆಗೆ ವಿವೇಕ್ ರಾವ್

ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ.ಈ ವಿಚಾರವಾಗಿ ದಿನಕ್ಕೊಂದು ಹಾವು ಏಣಿ ಆಟ ಶುರುವಾಗಿದೆ

ಮಾಜಿ ಸಚಿವ ರಮೇಶ್ ಜಾರಕಿಹೊಳಿ  ಮಾಜಿ ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ್ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ವಿವೇಕರಾವ್ ಪಾಟೀಲ ಶೀಘ್ರದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿಗೆ ವಿವೇಕರಾವ್ ಪಾಟೀಲ ಅವರನ್ನು ಭೇಟಿಯಾಗಿ ಸುಧೀರ್ಘ ಸಮಾಲೋಚನೆ ನಡೆಸಿದ ರಮೇಶ್ ಜಾರಕಿಹೊಳಿ ವಿವೇಕರಾವ್ ಪಾಟೀಲ ಅವರನ್ನು ಮನವೊಲಿಸುವಲ್ಲಿ ಸಫಲರಾಗಿದ್ದಾರೆ.  ವಿವೇಕರಾವ್ ಪಾಟೀಲ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು, ಅವರೂ ಪಕ್ಷೇತರಾಗಿ ಚುನಾವಣೆಗೆ ಸ್ಪರ್ದೆ ಮಾಡುತ್ತಾರೆ ಎನ್ನುವ ಸುದ್ದಿ  ಪ್ರಚಾರ ಪಡೆದಿತ್ತು, ಆದ್ರೆ ವಿಧಾನ ಪರಿಷತ್ತಿನ ಚುನಾವಣೆಯನ್ನು ಗಂಭೀರವಾಗಿ ಪರಗಣಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆಯಾದ್ಯಂತ ಮಿಂಚಿನ ಪ್ರಚಾರ ನಡೆಸಿದ್ದಾರೆ. ವಿವೇಕರಾವ್ ಪಾಟೀಲ ಅವರನ್ನು ಬಿಜೆಪಿ ತೆಕ್ಕೆಗೆ ತರುವ ಮೂಲಕ ರಮೇಶ್ ಜಾರಕಿಹೊಳಿ ಸಿಕ್ಸರ್ ಬಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರನ್ನು ಗೆಲ್ಲಿಸುವ ಸಂಕಲ್ಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ  ವಿಚಾರವನ್ನು ಗಂಭೀರವಾಗಿ ಪರಗಣಿಸಿದ್ದಾರೆ.

ಇತ್ತ ಕಾಂಗ್ರೆಸ್ ನಾಯಕರು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಹೋದರ ಚನ್ನರಾಜ್ ಹಟ್ಟಿಹೋಳಿಯನ್ನು ಕಣಕ್ಕಿಳಿಸಿದ್ದು ಬಹಳ ಕುತೂಹಲ ಕೆರಳಿಸಿದೆ. ಇದು ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಾಜಕೀಯ ಲಕ್ಕಾಚಾರದ ಚರ್ಚೆ ಶುರುವಾಗಿದೆ. ಹೆಬ್ಬಾಳಕರ್ ವರ್ಚಸ್ ಜಾರಕಿಹೋಳಿ ಬ್ರದರ್ಸ್ ಎನ್ನುವಂತೆ ಚರ್ಚೆ ನಡೆಯುತ್ತಿದೆ. ಆ ನಿಟ್ಟಿನಲ್ಲಿ ಎರಡು ರಾಷ್ಟ್ರೀಯ ಪಕ್ಷದ ನಾಯಕರು ಸಭೆ ಮೇಲೆ ಸಭೆ ನಡೆಸಿ ಗೆಲುವಿನ ತಂತ್ರ ರೋಪಿಸುತ್ತಿದ್ದಾರೆ.

Exit mobile version