Tuesday, September 2, 2025
HomeUncategorizedಜನವಿರೋಧಿ ಆಡಳಿತ ಖಂಡಿಸಿ ಕನ್ನಡ ಸಂಘಟನೆಗಳ ಪ್ರತಿಭಟನೆ

ಜನವಿರೋಧಿ ಆಡಳಿತ ಖಂಡಿಸಿ ಕನ್ನಡ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ : ನಗರಸಭೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯ ಮಾಡಿಕೊಡವಲ್ಲಿ ವಿಳಂಬವಾಗುತ್ತಿದೆ ಹಾಗೂ ಹತ್ತಾರು ವರ್ಷಗಳಿಂದ ವರ್ಗಾವಣೆ ಯಾಗದೇ ಅಧಿಕಾರಿಗಳು ಭ್ರಷ್ಟಾಚಾರ ವೆಸಗುತ್ತಿದ್ದಾರೆಂದು ಆರೋಪಿಸಿ ಇಂದು ಚಾಮರಾಜನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ.

ನಗರಸಭೆಯ ಮುಂದೆ ಜಮಾಯಿಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ನಗರಸಭೆ ಕಾರ್ಯ ವೈಖರಿಯನ್ನು ಖಂಡಿಸಿ ಒಂದು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ಧರಣಿ ನಡೆಸಿದರು. ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗುವ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ ಅಲ್ಲದೆ ಅವರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದ್ದರು.

ನಗರಸಭೆಯಲ್ಲಿ ಇ ಸ್ವತ್ತು ಬೇಕಾದರೆ ಸಾಮಾನ್ಯ ಜನರಿಗೆ ವರ್ಷವಾದರೂ ಸಿಗುವುದಿಲ್ಲ ಅದೇ ಹಣ ನೀಡಿದರೆ ಮನೆಗೆ ತಲುಪಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದ ಅವರು, ದೀರ್ಘಕಾಲದಿಂದ ಇಲ್ಲೇ ಉಳಿದಿರುವ ಅಧಿಕಾರಿಗಳನ್ನೂ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments