Tuesday, September 2, 2025
HomeUncategorizedಕಾಂಗ್ರೆಸ್ ಬಿಜೆಪಿ ಅಭ್ಯರ್ಥಿಗಳ ನಾಮ ಪತ್ರ ಸಲ್ಲಿಕೆ, ಒಳಗೊಳಗೆ ಆರಂಭವಾದ ಭಿನ್ನಮತ

ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿಗಳ ನಾಮ ಪತ್ರ ಸಲ್ಲಿಕೆ, ಒಳಗೊಳಗೆ ಆರಂಭವಾದ ಭಿನ್ನಮತ

ವಿಜಯಪುರ : ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾದ ಹಿನ್ನಲೆ, ವಿಜಯಪುರ ಬಾಗಲಕೋಟ ಅವಳಿ ಜಿಲ್ಲೆಯ ಎಂ ಎಲ್ ಸಿ ಚುನಾವಣೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಅವಳಿ ಜಿಲ್ಲೆಯ ತಮ್ಮ ಬೆಂಬಲಿಗರು ಜೊತೆಗೂಡಿ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವದರೊಂದಿಗೆ ಅಭ್ಯರ್ಥಿಗಳು ರಣಕಹಳೆ ಮೊಳಗಿಸಿದ್ದಾರೆ. ಇದರ ಮದ್ಯೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಒಳಗೊಳಗೊಳಗೆ ಭಿನ್ನಮತವಂತೂ ಸ್ಪೋಟಗೊಂಡಿದೆ.

ಎಂ ಎಲ್ ಸಿ ಚುನಾವಣೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿತ್ತು.‌ ಹಾಲಿ ಎಂ ಎಲ್ ಸಿ ಕಾಂಗ್ರೆಸ್ ನ ಅಬ್ಯರ್ಥಿ ಸುನೀಲಗೌಡ ಪಾಟೀಲ ಅವರು ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಲ್ಲಿ ನಗರದ ಆರಾಧ್ಯ ದೈವ ಸಿದ್ದೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನೇರವಾಗಿ ತಮ್ಮ ಬೆಂಬಲಿಗರ ಜೊತೆಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿ ಪಿ ಎಚ್ ಪೂಜಾರ್ ಇಂದು ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ಪಿ ಎಚ್ ಪೂಜಾರ್ ಎರಡನೇ ಬಾರಿ ನಾಮಪತ್ರ ಸಲ್ಲಿಸಿದರು. ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಬಿಜೆಪಿ ಜನ ಪ್ರತಿನಿಧಿಗಳು ಮತ್ತು ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎ ಎಸ್ ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಶ್ರೀಕಾಂತ್ ಕುಲಕರ್ಣಿ ಮತ್ತಿತರು ಸಾಥ್ ನೀಡಿದರು.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಕಣದಲ್ಲಿ ರಣಕಹಳೆ ಮೊಳಗಿಸಿದ್ದಾರೆ. ಇನ್ನೂ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಒಂದೊಂದೇ ಅಬ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಒಳಗೊಳಗೆ ಒಪ್ಪಂದ ಮಾಡಿಕೊಂಡಂತೆ ಕಾಣುತಿದೆ. ಒಂದೆಡೆ ಎಸ್ ಆರ್ ಪಾಟೀಲ್ ಅವರಿಗೆ ಟಿಕೇಟ್ ನೀಡದೇ ಇರುವದು ಕಾಂಗ್ರೆಸ್ ನಲ್ಲಿ ಭಿನ್ನಮತಕ್ಕೆ ಕಾರಣವಾದರೆ, ಬಿಜೆಪಿ ಪಕ್ಷದಲ್ಲಿ ಜಿಲ್ಲೆಯ ಹಲವು ಅಬ್ಯರ್ಥಿಗಳು ಆಕಾಂಕ್ಷಿಗಳಿದ್ದು ಒಂದೇ ಅಬ್ಯರ್ಥಿಗೆ ಟಿಕೇಟ್ ಕೊಟ್ಟಿದ್ದು ಕೆಲ ಕಾರ್ಯಕರ್ತರು ಒಳಗೊಳಗೆ ಭಿನ್ನಮತಕ್ಕೆ ಕಾರಣವಾಗುವಂತಾಗಿದೆ. ಇದು ಚುನಾವಣೆಯ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ‌ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಸುನೀಲ್ ಭಾಸ್ಕರ ಪವರ ಟಿವಿ ವಿಜಯಪುರ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments