Site icon PowerTV

ವಿಧಾನ ಪರಿಷತ್ ಚುನಾವಣೆ ನಾಮ ಪತ್ರ ಸಲ್ಲಿಕೆ

ಚಿತ್ರದುರ್ಗ : ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನವೆಂಬರ್ 23ರಂದು ಸ್ಪರ್ಧೆ ಕೋರಿ ಆರು ನಾಮಪತ್ರಗಳು ಸ್ವೀಕೃತವಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ನಾಮಪತ್ರಗಳ ಸಲ್ಲಿಸಿದವರ ವಿವರ ಇಂತಿದೆ. ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ನವೆಂಬರ್ 23ರಂದು ಮೂವರು ಅಭ್ಯರ್ಥಿಗಳಿಂದ ಒಟ್ಟು ಆರು ನಾಮಪತ್ರಗಳು ಸಲ್ಲಿಕೆಯಾಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಸೋಮಶೇಖರ ಬಿ ಹಾಗೂ ಎಸ್.ಮಂಜುಳ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದರು. ಕೆ.ಎಸ್.ನವೀನ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಒಂದು ನಾಮಪತ್ರ ಹಾಗೂ ಪಕ್ಷೇತರರಾಗಿ ಮೂರು ನಾಮಪತ್ರಗಳನ್ನು ಸಲ್ಲಿಸಿದರು.

ನವೆಂಬರ್ 20 ರಂದು ಪಕ್ಷೇತರ ಅಭ್ಯರ್ಥಿಯಾಗಿ ಹನುಮಂತಪ್ಪ ಅವರು ನಾಮಪತ್ರ ಸಲ್ಲಿಸಿದ್ದರು.
ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಕೊನೆಯ ದಿನಾಂಕ ಮುಕ್ತಾಯವಾಗಿದ್ದು, ನವೆಂಬರ್ 16 ರಿಂದ ನವೆಂಬರ್ 23 ರವರೆಗೆ ನಾಲ್ಕು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ.

Exit mobile version