Wednesday, September 3, 2025
HomeUncategorizedಬೆಳ್ಳಂ ಬೆಳಗ್ಗೆ ಎಸಿಬಿ ಬಿಗ್​ ಶಾಕ್​ : ರಾಜ್ಯದಾದ್ಯಂತ ಸೇರಿ 60 ಕಡೆ ಏಕಕಾಲಕ್ಕೆ...

ಬೆಳ್ಳಂ ಬೆಳಗ್ಗೆ ಎಸಿಬಿ ಬಿಗ್​ ಶಾಕ್​ : ರಾಜ್ಯದಾದ್ಯಂತ ಸೇರಿ 60 ಕಡೆ ಏಕಕಾಲಕ್ಕೆ ದಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, 8ಜನ ಎಸಿಬಿ ಎಸ್​​ಪಿಗಳ ನೇತೃತ್ವದಲ್ಲಿ ದಾಳಿ ಮಾಡಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.

ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

15 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ

  • ಕೆ.ಎಸ್ ಲಿಂಗೇಗೌಡ, ಎಕ್ಸಿಕ್ಯೂಟಿವ್ ಎಂಜಿನಿಯರ್, ಸ್ಮಾರ್ಟ್ ಸಿಟಿ ಯೋಜನೆ ಮಂಗಳೂರು.
  •  ಶ್ರೀವಿವಾಸ್ ಕೆ, ಎಕ್ಸಿಕ್ಯೂಟಿವ್ ಎಂಜಿನಿಯರ್. ಹೆಚ್.ಎಲ್.ಬಿ.ಸಿ ಮಂಡ್ಯ.
  •  ಲಕ್ಷ್ಮಿಕಾಂತಯ್ಯ, ರೆವಿನ್ಯೂ ಇನ್ಸ್​​​​ಪೆಕ್ಟರ್, ದೊಡ್ಡಬಳ್ಳಾಪುರ
  •  ವಾಸುದೇವ, ಪ್ರಾಜೆಕ್ಟ್ ಮ್ಯಾನೇಜರ್, ನಿರ್ಮಿತಿ ಕೇಂದ್ರ ಬೆಂಗಳೂರು.
  •  ಬಿ.ಕೃಷ್ಣಾರೆಡ್ಡಿ, ಜನರಲ್ ಮ್ಯಾನೇಜರ್, ನಂದಿನಿ ಡೈರಿ ಬೆಂಗಳೂರು.
  • ಟಿ.ಎಸ್.ರುದ್ರೇಶಪ್ಪ, ಜಾಯಿಂಟ್ ಡೈರೆಕ್ಟರ್, ಅಗ್ರಿಕಲ್ಟರ್ ಡಿಪಾರ್ಟ್‌ಮೆಂಟ್ ಗದಗ.
  •  ಎ.ಕೆ.ಮಸ್ತಿ, ಕೋ ಆಪರೇಟಿವ್ ಡೆವಲಪ್ಟೆಂಟ್ ಆಫೀಸರ್, ಸವದತ್ತಿ ಡೆಪ್ಯೂಟೇಷನ್, ಬೈಲಹೊಂಗಲ.
  • ಸದಾಶಿವ ಮರಲಿಂಗಣ್ಣನವರ್, ಸೀನಿಯರ್ ಮೋಟಾರ್ ಇನ್ಸ್ ಪೆಕ್ಟರ್ ಗೋಕಾಕ್
  • ನಾತಾಜೀ ಹೀರಾಜಿ ಪಾಟೀಲ್, ಗ್ರೂಪ್ ಸಿ ಹೆಸ್ಕಾಂ ಬೆಳಗಾವಿ.
  • ಕೆ.ಎಸ್.ಶಿವಾನಂದ್, ರಿಟೈರ್ಡ್ ಸಬ್ ರಿಜಿಸ್ಟರ್ ಬಳ್ಳಾರಿ.
  •  ರಾಜಶೇಖರ್, ಫಿಜಿಯೋಥೆರಪಿಸ್ಟ್, ಯಲಹಂಕ ಸರ್ಕಾರಿ ಆಸ್ಪತ್ರೆ.
  •  ಮಾಯಣ್ಣ.ಎಂ, ಎಫ್.ಡಿ.ಸಿ ಬಿಬಿಎಂಪಿ, ರೋಡ್ & ಇನ್ಫಾಸ್ಟ್ರಕ್ಚರ್ ಬೆಂಗಳೂರು.
  •  ಎಲ್.ಸಿ.ನಾಗರಾಜ್, ಸಕಾಲ, ಅಗ್ನಿ ಶ್ರೇಷನ್ ಆಫಿಸರ್, ಬೆಂಗಳೂರು.
  •  ಜಿ.ಎ.ಗಿರಿ, ಡಿ ಗ್ರೂಪ್ ಸಿಬ್ಬಂದಿ, ಬಿಬಿಎಂಪಿ ಯಶವಂತಪುರ.
  •  ಎಸ್.ಎಂ.ಬಿರಾದಾರ್‌, ಜಾಯಿಂಟ್ ಎಂಜಿನಿಯರ್, ಲೋಕೋಪಯೋಗಿ ಇಲಾಖೆ, ಜೇವರ್ಗಿ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments