Site icon PowerTV

ಬೆಳ್ಳಂ ಬೆಳಗ್ಗೆ ಎಸಿಬಿ ಬಿಗ್​ ಶಾಕ್​ : ರಾಜ್ಯದಾದ್ಯಂತ ಸೇರಿ 60 ಕಡೆ ಏಕಕಾಲಕ್ಕೆ ದಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಒಟ್ಟು 60 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, 8ಜನ ಎಸಿಬಿ ಎಸ್​​ಪಿಗಳ ನೇತೃತ್ವದಲ್ಲಿ ದಾಳಿ ಮಾಡಿ ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.

ಸಕಾಲ ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

15 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ

Exit mobile version