Site icon PowerTV

ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಶಾಸಕಿ ಭರವಸೆ

ಚಿತ್ರದುರ್ಗ : ಹಿರಿಯೂರು ತಾಲ್ಲೂಕು ವಾಣಿವಿಲಾಸ ಪುರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತಯಾಚನೆ ಕಾರ್ಯಕ್ರಮದ ಸಂದರ್ಭದಲ್ಲಿ ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಲಗೆರೆ ಗ್ರಾಮದ ಜನರು ವಾಣಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಬೇಡಿಕೆಯನ್ನು ಇಟ್ಟಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯೂರು ಶಾಸಕಿ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್​ರವರು ಸುಮಾರು 2003,2004 ರಿಂದ ಕಾರ್ಖಾನೆ ಚಾಲನೆಯಲ್ಲಿ ಇಲ್ಲ. ಮತ್ತು 2004 ರಿಂದ ರೈತರು ಕಬ್ಬನ್ನು ಬೆಳೆಯುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ದಾರೆ.ಹಾಗಾಗಿ ಸಕ್ಕರೆ ಕಾರ್ಖಾನೆ ಮತ್ತೆ ಪುನರಾರಂಭ ಆಗಬೇಕಾದರೆ ಮೊದಲು ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೇ ಸಂಬಂಧಪಟ್ಟ ಇಲಾಖೆಗಳಲ್ಲಿ ಮಾಹಿತಿಯನ್ನು ಕೇಳಿದ್ದೇನೆ, ಪ್ರಸ್ತುತ ಸರ್ಕಾರ ಕಾರ್ಖಾನೆಯನ್ನು ಪುನರಾರಂಭ ಮಾಡಲು 400 ರಿಂದ 500 ಕೋಟಿ ರೂಪಾಯಿಗಳು ಬೇಕಾಗುತ್ತದೆ, ನಾನು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಸರ್ಕಾರಕ್ಕೆ ಒತ್ತಾಯ ಮಾಡಿ ಪುನರಾರಂಭಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

Exit mobile version