Site icon PowerTV

ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲಾಗುವುದು : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಹವಾಮಾನ ವೈಪ್ಯರಿತ್ಯರಿಂದ ವಿಮಾನ ತಡವಾಗಿ ಲ್ಯಾಡಿಂಗ್ ಆಗಿದೆ. ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಇಂದು ಶಿಗ್ಗಾಂವ ನಲ್ಲಿ ಮತಚಲಾವಣೆ ಮಾಡುವೆ ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ‌ಮಾತನಾಡಿದ ಅವರು ಓಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧನೆ ಸದ್ಯಕ್ಕಿಲ್ಲ. ಹಾಗೂ ಅದರ ಬಗ್ಗೆ ಯಾವುದೇ ತೀರ್ಮಾನವನ್ನ ಕೈಗೊಂಡಿಲ್ಲ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನ ಮಾಡುತ್ತೇವೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನೋ ಆ್ಯಪ್​ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿದರು.

Exit mobile version